ಮೋರಿಗೆ ಬಿದ್ದ ಕಾರು : ಆರು ಮಂದಿಗೆ ಗಾಯ
ಬೆಂಗಳೂರು-ಮಂಗಳೂರು ಹೆದ್ದಾರಿಯ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಪಕ್ಕದ ಮೋರಿಗೆ ಬಿದ್ದ ಘಟನೆ ಸಂಭವಿಸಿದೆ.
ಬೆಂಗಳೂರು ಆರ್‍ಟಿ ನಗರದ ನಿವಾಸಿಗಳಾದ ಇವರು ಮಂಗಳೂರಿಗೆ ಪ್ರಯಾಣಿಸುತ್ತಿದ್ದರು. ಇದೇ ಸಂದರ್ಭದಲ್ಲಿ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಮೋರಿಗೆ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರ ಪೈಕಿ ಮಗು ಹೊರತುಪಡಿಸಿ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೆÇಲೀಸರು ಭೇಟಿ ನೀಡಿ ಪರಿಶೀಲಿಸಿದರು.