Kadaba: ಚಿನ್ನದಂಗಡಿ ಉದ್ಘಾಟನೆಯ ತಯಾರಿಯಲ್ಲಿದ್ದ ಯುವಕನ ಮೃತದೇಹ ಪತ್ತೆ
ಕಡಬ: ತನ್ನದೇ ಚಿನ್ನದ ಅಂಗಡಿ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಜೂ. 22ರ ಗುರುವಾರ ಕಂಡುಬಂದಿದೆ.
ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ.
ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದರು.
ಆದರೆ ಇಂದು ಬೆಳಿಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಕೆಂಪುಹೊಳೆ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ.