HomeFresh Newsಕಡಬ: ಮಸೀದಿ ಆವರಣದೊಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಬಂಧನ

ಕಡಬ: ಮಸೀದಿ ಆವರಣದೊಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳ ಬಂಧನ

ಕಡಬ: ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳಿಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ (26) ಎಂದು ಗುರುತಿಸಲಾಗಿದೆ.

ಆರೋಪಿಗಳು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಆಗಮಿಸಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು ಪರಾರಿಯಾಗಿದ್ದರು. ಬೈಕಿನಲ್ಲಿ ಕಾಂಪೌಂಡ್ ಒಳಗಡೆ ಬಂದು ತೆರಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಕಡಬ ಠಾಣಾ ಸಬ್ ಇನ್ಸ್‍ಪೆಕ್ಟರ್ ಅಭಿನಂದನ್, ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‍ಪೆಕ್ಟರ್ ರಾಜೇಶ್ ಹಾಗೂ ಸಿಬ್ಬಂದಿಗಳು ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ತನಿಖೆಯನ್ನು ಚುರುಕುಗೊಳಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments