ಕಡಬ : ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ

ಕಡಬ: ಇನ್ನೋವಾ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ಪಂಜ – ಕಡಬ ರಸ್ತೆಯ ಕೋಡಿಂಬಾಳದಲ್ಲಿ ನಡೆದಿದೆ.ಧರ್ಮಸ್ಥಳ ಮೂಲದವರಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.