ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ನೇಮಕ
ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿದ್ದ ಇವರು ಈ ಹಿಂದೆ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.ಕಡಬ ಕ್ಷೇತ್ರದ ಜಿ.ಪಂ. ಸದಸ್ಯರಾಗಿ, ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಬಿಜೆಪಿ ಸಮಿತಿ ಸದಸ್ಯರಾಗಿಯೂ ವಿವಿಧ ಕ್ಷೇತ್ರಗಳಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು. ರಾಜ್ಯ ಬಿಜೆಪಿ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿರುವ ಇವರು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕ್ಕಾಗಿ ಹಲವು ಅನುದಾನ ತರಿಸುವಲ್ಲಿ ಶ್ರಮಿಸಿದ್ದರು.