ಸವಣೂರಿನಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ : ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ

ಕಡಬ,ಸವಣೂರು : ಮಾತೃಭೂಮಿ ಸಾವಯವ ಕೃಷಿ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಕಡಬ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಅರಣ್ಯ ಇಲಾಖೆ ಪುತ್ತೂರು ,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ ವತಿಯಿಂದ ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ ಹಾಗೂ ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ ಮಾತನಾಡಿ, ಕೃಷಿ ಅರಣ್ಯೀಕರಣ ಕಾರ್ಯಕ್ರಮಗಳಲ್ಲಿ ರೈತರು, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳನ್ನು ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರೇಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ’ ಯನ್ನು ಆರಂಭಿಸಿದೆ ಎಂದರು.

ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ಮಾತನಾಡಿ,ಸೈನಿಕ ಹಾಗೂ ರೈತ ದೇಶದ ಶಕ್ತಿ.ಈ ನಿಟ್ಟಿನಲ್ಲಿ ರೈತನ ಕೈ ಬಲಪಡಿಸಬೇಕಾದರೆ ಎಲ್ಲರೂ ಸಂಘಟಿತರಾಗಬೇಕು, ಸಾವಯವದಿಂದ ವಿಷ ಮುಕ್ತ ಕೃಷಿ ಮಾಡುವ ಮೂಲಕ ವಿಷಮುಕ್ತ ಆಹಾರ ಉತ್ಪಾದನೆ ಸಾಧ್ಯ ಇದರಿಂದ ಆರೋಗ್ಯ ವೃದ್ದಿಯಾಗುತ್ತದೆ ಎಂದರುಮಾತೃಭೂಮಿ ಸಾವಯವ ಕೃಷಿ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಡಬ ತಾಲೂಕು ಅಧ್ಯಕ್ಷ ಉಮೇಶ್ ಸಾಯಿರಾಮ್, ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಭಾರತಿ ಗ್ರಾಮ ವಿಕಾಸ ಪ್ರತಿಷ್ಟಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.