ಕಡಬ ಪ.ಪಂ. ವ್ಯಾಪ್ತಿಗೆ ನಗರೋತ್ಥಾನ ಯೋಜನೆಯಡಿ ವಿಶೇಷ ಅನುದಾನ

ಕಡಬ:ಸಚಿವ ಎಸ್. ಅಂಗಾರ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದಿಂದ ನಗರೋತ್ಥಾನ ಯೋಜನೆಯಡಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಮಂಜೂರಾದ 5 ಕೋಟಿ ರೂ. ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮಂಜೂರಾದ 2.90 ಕೋಟಿ ರೂ. ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು.

ಬಳಿಕ ಕಡಬ ಸಿ.ಎ.ಬ್ಯಾಂಕ್ ವಠಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆ ದೇಶ ಮತ್ತು ರಾಜ್ಯವನ್ನು ಆಳಿದ ಕಾಂಗ್ರೆಸ್ ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ದಿ ಕಾರ್ಯಗಳು ನಡೆಯುತ್ತಿರಲಿಲ್ಲ, ಆದರೆ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆದ ಬಳಿಕ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಸಡಕ್ ಯೋಜನೆಯನ್ನು ತರಲಾಯಿತು. ಇದರಿಂದ ಗ್ರಾಮ ಗ್ರಾಮಗಳ ಮಧ್ಯೆ ಸಂಪರ್ಕ ರಸ್ತೆಗಳು ಅಭಿವೃದ್ದಿಯಾದವು, ಬಳಿಕ ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯಿತು ಎಂದರು. ವೇದಿಕೆಯಲ್ಲಿ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಪ್ರ.ಶಿಕ್ಷಣ ಪ್ರಕೋಷ್ಠದ ಸಂಚಾಲಕ ಕೃಷ್ಣ ಶೆಟ್ಟಿ ಕಡಬ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಪ್ರಮುಖರಾದ ಸತೀಶ್ ನಾಯಕ್, ಪುಲಾಸ್ತ್ಯ ರೈ, ಪ್ರಕಾಶ್ ಎನ್.ಕೆ. ರಮೇಶ್ ಕಲ್ಪುರೆ, ಸೀತಾರಾಮ ಗೌಡ ಪೆÇಸವಳಿಕೆ, ಸುಂದರ ಗೌಡ ಮಂಡೆಕರ, ಸುಳ್ಯ ಮಂಡಲ ಸಾಮಾಜಿಕ ಜಾಲತಾಣದ ಸಂಚಾಲಕ ಘಯಾಜ್ ಕೆನರಾ, ತಾಲೂಕು ಪಂ ಮಾಜಿ ಸದಸ್ಯೆ ಪಿ.ವೈ ಕುಸುಮಾ ಉಪಸ್ಥಿತರಿದ್ದರು. ಕಡಬ ಶಕ್ತಿ ಕೇಂದ್ರದ ಅಧ್ಯಕ್ಷ ಗಿರೀಶ್ ಎ.ಪಿ. ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕೇಶವ ಬೇರಿಕೆ ವಂದನಾರ್ಪಣೆ ಸಲ್ಲಿಸಿದರು. ಯುವ ಮೊರ್ಛ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.