ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಹಲ್ಲೆ ಆರೋಪ ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಬಂಧನ -ಸೇವೆಯಿಂದ ಅಮಾನತು

ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ ಎಂದು ತಿಳಿದುಬಂದಿದೆ. ರಾಜು ನಾಯ್ಕರವರು ತಡರಾತ್ರಿ ಮನೆಯೊಳಗೆ ಅಕ್ರಮಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಬಾಬು ಗೌಡ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಈ ದೂರಿನ ಹಿನ್ನೆಲೆಯಲ್ಲಿ ಆರೋಪಿ ರಾಜು ನಾಯ್ಕ ರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಹಾಗೂ ಆತನನ್ನು ತಕ್ಷಣ ಕರ್ತವ್ಯದಿಂದ ಅಮಾನತುಗೊಳಿಸಲಾಗಿರುತ್ತದೆ ಎಂದುದ.ಕ.ಜಿಲ್ಲಾ ಪೊಲೀಸ್‌ ಪ್ರಕಟಣೆ ತಿಳಿಸಿದೆ.

Related Posts

Leave a Reply

Your email address will not be published.