HomeFresh Newsಕಡಬ: ಸರಣಿ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರು

ಕಡಬ: ಸರಣಿ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರು


ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಸರಣಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಕೊನೆಗೂ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

ಕಡಬ ಪೊಲೀಸ್‌ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 110/16, 112/16, 113/16 8 114/16ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಕಲಂ 457 ಮತ್ತು 380ರಂತೆ ಪ್ರಕರಣಗಳು ದಾಖಲಾಗಿದ್ದವು.

ಈ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ದೊಡ್ಡಬಳ್ಳಾಪುರದ ನರಸಿಂಹ ಅಲಿಯಾಸ್ ರಾಜು, ಮಹಾರಾಷ್ಟ್ರದ ವಿಜಯ್ ಸುರೇಶ್ ಪೊಂಕೆ, ನವೀನ್ ಚಂದ್ರ ಸಿಂಗ್, ಉತ್ತರ ಕನ್ನಡದ ಚಂದ್ರಕಾಂತ್ ಪೂಜಾರಿ ಹಾಗೂ ಮಂಡ್ಯದ ಪ್ರಕಾಶ್ ಬಹದ್ದೂ‌ರ್ ಅವರಿಗೆ ಈಗಾಗಲೇ ಪುತ್ತೂರಿನ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು.

ಇದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರ ಮೂಲದ ವಿಶಾಲ್ ಪೊಂಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನ ಪತ್ತೆಗಾಗಿ ಪೊಲೀಸರು ಪ್ರಯತ್ನ ನಡೆಸಿದ್ದು, ಆರೋಪಿಯ ವಿರುದ್ಧ ನ್ಯಾಯಾಲಯದಿಂದ ಪ್ರೊಕ್ಲಮೇಶನ್‌ ಹೊರಡಿಸಲಾಗಿತ್ತು.

ಅಂತಿಮವಾಗಿ 2026ರ ಅಕ್ಟೋಬರ್ 30ರಂದು ವಿಶಾಲ್ ಪೊಂಕೆ ಪುತ್ತೂರಿನ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ (ಸಂಚಾರಿ ನ್ಯಾಯಾಲಯ, ಕಡಬ)ಕ್ಕೆ ಹಾಜರಾಗಿದ್ದಾನೆ. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ವಿಶಾಲ್ ಪೊಂಕೆ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಎಂಒಬಿ ತೆರೆಯಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿಯೂ ಅಪರಾಧ ಸಂಖ್ಯೆ 105/2016ರ ಅಡಿಯಲ್ಲಿ ಐಪಿಸಿ ಕಲಂ 457 ಮತ್ತು 380ರಂತೆ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments