ಕಡಬ : ವಾಟ್ಸ್ಯಾಪ್ ಸ್ಟೇಟಸ್ ಹಾಕಿ, ನೇಣು ಬಿಗಿದು ಯುವಕ ಆತ್ಮಹತ್ಯೆ ‌

ಕಡಬ : ವಾಟ್ಸ್ಯಾಪ್ ಸ್ಟೇಟಸ್ ಹಾಕಿದ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಇಚಿಲಂಪಾಡಿಲ್ಲಿ ಕಳೆದ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ರೆನೀಶ್ (27) ವರ್ಷ ಎಂದು ಗುರುತಿಸಲಾಗಿದೆ.

ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಈತನ ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ. ನಿನ್ನೆಯೂ ಕೂಡ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ.

ಆದರೆ ಸತತ ಸಾವುಗಳನ್ನು ಕಂಡ ರೆನೀಶ್ ಒಬ್ಬಂಟಿಯಾಗಿದ್ದರಿಂದ ಮಾನಸಿಕವಾಗಿಯೂ ನೊಂದಿದ್ದ ಎನ್ನಲಾಗಿದೆ. ಕಳೆದ ರಾತ್ರಿ ರೆನೀಶ್ ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್ ನ ಸ್ಟೇಟಸ್ ನಲ್ಲಿ ಬರೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ ನಾಯ್ಕ ಸೇರಿದಂತೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಶರೀರವನ್ನು ಉಪ್ಪಿನಂಗಡಿಯ ಶವಾಗಾರಕ್ಕೆ ಸಾಗಿಸಲಾಗಿದೆ

Related Posts

Leave a Reply

Your email address will not be published.