ಕದ್ರಿ ದೇವಾಲಯಕ್ಕೆ ನುಗ್ಗಲೆತ್ನಿಸಿದ ಅಪರಿಚಿತ ಯುವಕರು : ಪೊಲೀಸರಿಂದ ತೀವ್ರ ವಿಚಾರಣೆ

ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯಕ್ಕೆ ಬೈಕ್ ನೊಂದಿಗೆ ನುಗ್ಗಲೆತ್ನಿಸಿದ ಅಪರಿಚಿತ ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೇ 11ರಂದು ರಾತ್ರಿ ವೇಳೆ ನಡೆದಿದೆ. ಅಸೈಗೋಳಿ ನಿವಾಸಿ ಹಸನ್ ಶಾಹಿನ್, ಜಾಫರ್ , ಫಾರೂಕ್ ಕೃತ್ಯ ಎಸಗಿದ ಆರೋಪಿಗಳು.

ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಕಂಡು ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಬಳಿಕ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಕದ್ರಿ ಠಾಣಾ ಪೊಲೀಸ್ ಅಧಿಕಾರಿಗಳು ಮೂವರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಗೂಗಲ್ ಮ್ಯಾಪ್ ಹಾಕಿ ದಾರಿ ತಪ್ಪಿ ಬಂದಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ. ಆದರೆ ಸತ್ಯಾಸತ್ಯತೆ ಇನ್ನಷ್ಟೇ ತಿಳಿದು ಬರಬೇಕಾಗಿದೆ. ನಗರದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್ ಕದ್ರಿ ದೇವಾಲಯ ಆವರಣದಲ್ಲಿ ಬಾಂಬ್ ಸ್ಪೋಟಕ್ಕೆ ಸಂಚು ರೂಪಿಸಿದ್ದ ಎಂಬ ವಿಚಾರ ಬಯಲಾಗಿತ್ತು. ಆದರೆ ಕುಕ್ಕರ್ ಬಾಂಬ್ ಗರೋಡಿ ಬಳಿಯೇ ಸ್ಪೋಟಗೊಂಡು ಆತನ ಸಂಚು ವಿಫಲವಾಗಿತ್ತು.

Related Posts

Leave a Reply

Your email address will not be published.