ಕದ್ರಿ ದೇವಸ್ಥಾನದಿಂದ ಭದ್ರತೆಗಾಗಿ ಮನವಿ 

ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗೆ ಕದ್ರಿ ದೇವಸ್ಥಾನದಲ್ಲಿ ಸ್ಪೋಟಿಸುವ ಗುರಿ ಇತ್ತು ಎಂಬ ವಿಚಾರ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ದ ಕದ್ರಿ ಮಂಜುನಾಥ ದೇವಳದ ಆಡಳಿತ ಪೊಲೀಸ್ ಇಲಾಖೆಗೆ ಭದ್ರತೆಗಾಗಿ ಮನವಿ ಮಾಡಿದೆ.

ಕದ್ರಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಅವರು ತನ್ನ ವ್ಯಾಪ್ತಿಯ ಕದ್ರಿ ಪೊಲೀಸ್ ಠಾಣೆಗೆ ಲಿಖಿತ ದೂರೊಂದನ್ನು ನೀಡಿದ್ದಾರೆ ಜೊತೆಗೆ ಭದ್ರತೆ ಒದಗಿಸಲು ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಉಗ್ರನಿಗೆ ಕದ್ರಿ ದೇವಸ್ಥಾನದಲ್ಲಿ ಬಾಂಬ್ ಸ್ಫೋಟಿಸುವ ಗುರಿ ಇತ್ತು ಎಂದು ತಿಳಿದು ಬಂದಿರುವುದರಿಂದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಇತಿಹಾಸ ಪ್ರಸಿದ್ದ ದೇವಸ್ಥಾನಕ್ಕೆ ಪೊಲೀಸ್ ಭದ್ರತೆ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

Related Posts

Leave a Reply

Your email address will not be published.