ಪಡುಬಿದ್ರಿ: ನವರಾತ್ರಿಯ ಐದನೇ ದಿನದ ಅಂಗವಾಗಿ ಕಳತೂರು ವಿಶ್ವಕರ್ಮ ಸಭಾಭವನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅನುಗ್ರಹವನ್ನು ಕೋರಿ ಕ್ಷೇತ್ರಕ್ಕೆ ಭೇಟಿ ನೀಡಿದ ಕಳತೂರು ವಿಶ್ವಕರ್ಮ ಸಭಾಭವನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮುಕ್ರ ಗುತ್ತು ಜನಾರ್ದನ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಹರೀಶ್ ಆಚಾರ್ಯ ಕಳತೂರು ಹಾಗೂ ಯುವ ಸಂಘಟನೆಯ ಉಪಾಧ್ಯಕ್ಷ ವಿಜಯ ಆಚಾರ್ಯ ಪಡುಬಿದ್ರಿ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡುಬಿದ್ರಿ ವಲಯದ ಅಧ್ಯಕ್ಷ ಭುಜಂಗ ಆಚಾರ್ಯ ಪಡುಬಿದ್ರಿ ಉಪಸ್ಥಿತರಿದ್ದರು. ರಾಘವೇಂದ್ರ ಆಚಾರ್ಯ ಪಡುಬಿದ್ರಿ ಸಹಕರಿಸಿದರು.

