HomeFresh Newsಕನ್ನಡದಲ್ಲೇ ವ್ಯವಹರಿಸಲು ಮನವಿ

ಕನ್ನಡದಲ್ಲೇ ವ್ಯವಹರಿಸಲು ಮನವಿ

ಕನ್ನಡ ನೆಲ, ಜಲ ಭಾಷೆ, ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸುವಲ್ಲಿ ಕಸಾಪ ಬಹುಮುಖ್ಯ ಭೂಮಿಕೆ ವಹಿಸುತ್ತಿದೆ : ಡಾ ಚೂಂತಾರು
ಕನ್ನಡ ನಾಡಲ್ಲಿ ಎಲ್ಲರೂ ಕನ್ನಡದಲ್ಲಿಯೇ ವ್ಯವಹರಿಸುವಂತಾಗಬೇಕು. ಇತರ ರಾಜ್ಯದ ನೌಕರರು ನಮ್ಮ ರಾಜ್ಯದಲ್ಲಿ ಕೆಲಸ ಮಾಡುವಾಗ ಕನ್ನಡ ಭಾಷೆ ಕಲಿತು ಇಲ್ಲಿನ ಜನರೊಂದಿಗೆ ವ್ಯವಹರಿಸಬೇಕಾಗುತ್ತದೆ. ಕನ್ನಡ ಭಾಷೆಯಲ್ಲಿ ವ್ಯವಹರಿಸಿದರೆ ಇಲ್ಲಿಯ ಕನ್ನಡಿಗರ ಮನಸ್ಸನ್ನು ಗೆಲ್ಲಲು ಸಾಧ್ಯವಿದೆ ಎಂದು ಕಸಾಪ ನ ಗೌರವ ಕಾರ್ಯದರ್ಶಿ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.

ಬಿಜೈನಲ್ಲಿ ಕಾರ್ಯಾಚರಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ, ಬ್ಯಾಂಕ್ ಮ್ಯಾನೇಜರ್ ಶ್ರೀ ಅಖಿಲ್ ಮುಖ್ಯ ಪ್ರಬಂಧಕ, ಅವರಿಗೆ ಕನ್ನಡದಲ್ಲಿಯೇ ವ್ಯವಹರಿಸುತ್ತಿರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಇನ್ನೋರ್ವ ಕಾರ್ಯದರ್ಶಿ ಶ್ರೀ ಗಣೇಶ್ ಪ್ರಸಾದ್ ಜೀ, ಕೋಶಾಧಿಕಾರಿ ಶ್ರೀ ಸುಬ್ರಾಯ ಭಟ್ ಇವರುಗಳು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments