ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ
ಕಣ್ಣೂರು: ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದ ಪರಿಣಾಮ, ವಿಮಾನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ ಘಟನೆ ಸೋಮವಾರ ನಡೆದಿದೆ. ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಹಕ್ಕಿ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ. 135 ಮಂದಿ ಪ್ರಯಾಣಿಕರೊಂದಿಗೆ ಕೋಝಿಕ್ಕೋಡ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನವನ್ನು ದೆಹಲಿಗೆ ತೆರಳುವ ಮುನ್ನ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. 135 ಮಂದಿ ಪ್ರಯಾಣಿಕರಲ್ಲಿ 85 ಮಂದಿ ಕೋಝಿಕ್ಕೋಡ್‍ನವರು ಹಾಗೂ 50 ಮಂದಿ ಕಣ್ಣೂರಿನವರಾಗಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ನಿಲ್ದಾಣದ ಠಾಣಾಧಿಕಾರಿ ವಿವರಿಸಿದ್ದಾರೆ.