ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಫೆ. 26ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವ ನಡೆಯಲಿದೆ.

ಮೂರು ದಿನಗಳ ಕಾಲ ನಡೆಯುವ ಮಾತೃವೈಭವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು ಪ್ರತೀ ದಿನ ಮಧ್ಯಾಹ್ಹ ಮತ್ತು ರಾತ್ರಿ ನಿರಂತರ ಅನ್ನಸಂತರ್ಪಣೆ ನಡೆಯಲಿದ್ದು,ಅದಕ್ಕೆ ಪೂರಕವಾಗಿ ಭಕ್ತಾಧಿಗಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿAದ ಹೊರೆಕಾಣಿಕೆ ಸಂಗ್ರಹಿಸಲು ಸಮಿತಿಯು ತೀರ್ಮಾನಿಸಿದೆ.

ಕಾಪು ಮಾರಿಯಮ್ಮನ ಭಕ್ತಾಧಿಗಳು, ಕಾಪುವಿನ ಅಮ್ಮನ ಮಕ್ಕಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿAದ ಸಂಗ್ರಹಿಸುವ ಹೊರೆಕಾಣಿಕೆಯನ್ನು ಫೆ. 26ರಂದು ಸಂಜೆ ಗಂಟೆ 4 ಗಂಟೆಗೆ ಕಾಪು ಉಳಿಯಾರಗೋಳಿ ದಂಡತೀರ್ಥ ಮಠದ ಬಳಿಯಿಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆಯ ಮೂಲಕವಾಗಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಮರ್ಪಿಸಲಾಗುವುದು ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಮಾತೃವೈಭವ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಹೊರೆಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Leave a Reply

Your email address will not be published.