ಕಾಪು: ಹೊಸ ಮಾರಿಗುಡಿಯ ಶ್ರೀ ಮಾರಿಯಮ್ಮನ ದರುಶನ ಪಡೆದ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ
ಕಾಪು:ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾದವ ಆರ್. ಪಾಲನ್ ಹಾಗೂ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಉಪಸ್ಥಿತರಿದ್ದರು


















