ಕಾಪು ತಾಲೂಕು ಮಟ್ಟದ ಮುಂಗಾರು ಪೂರ್ವಭಾವಿ ಸಭೆ ಇಂದು ದಿನಾಂಕ 21-05-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರರ ಕಚೇರಿಯಲ್ಲಿ ನಡೆಯಿತು.

ಮುಂಗಾರು ಸಮೀಪಿಸುತ್ತಿರುವುದರಿಂದ ಗ್ರಾಮ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯ ವಾಣಿ ತೆರೆಯುವುದರ ಜೊತೆಗೆ ಗಂಜಿ ಕೇಂದ್ರ ಸ್ಥಾಪಿಸುವಂತೆ ಸಂಭಂದಿಸಿದ ಇಲಾಖಾಧಿಕಾರಿಗಳಿಗೆ ತಿಳಿಸಿ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರ ಗಿಡಗಳನ್ನು ತೆರವು ಗೊಳಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಅಪಾಯಕಾರಿ ವಿದ್ಯುತ್ ಕಂಬ ಮತ್ತು ತಂತಿಗಳನ್ನು ಸರಿಪಡಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಮತ್ತು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ರಸ್ತೆಗಳ ಚರಂಡಿ ಹಾಗೂ ರಸ್ತೆ ಇಕ್ಕೆಲಗಳಲ್ಲಿನ ಹುಲ್ಲು ಕಟಾವು ಹಾಗೂ ನೀರು ನಿಲ್ಲದಂತೆ ಕ್ರಮ ವಹಿಸುವಂತೆ ಹಾಗೂ ನುರಿತ ಈಜುಗಾರರ ಪಟ್ಟಿ ತಯಾರಿಸಿ ಸಿದ್ದರಿರುವಂತೆ ಅಗ್ನಿಶಾಮಕದವರಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ ಅನಂತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ ಹಾಗೂ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
