ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಅರಣ್ಯ ಮತ್ತು ಕಂದಾಯ ಇಲಾಖೆ 94/C, 94/CC ಹಕ್ಕುಪತ್ರವನ್ನು ವಿತರಿಸಲು ಕ್ರಮ ವಹಿಸಬೇಕು ಹಾಗೂ ಡೀಮ್ಡ್ ಫಾರೆಸ್ಟ್ ಇರುವ ಸ್ಥಳದಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸಿ ಕಂದಾಯ ಭೂಮಿ ಹಸ್ತಾಂತರಿಸಲು ಕ್ರಮವಹಿಸುವಂತೆ, ಅಲ್ಲಲ್ಲಿ ನೀರಿನ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ ಕೊಳವೆ ಬಾವಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ, ಕೆಲ ದಿನಗಳಿಂದ ಕಾಪು ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಅಪಘಾತ ತಡೆಗೆ ಸರ್ವಿಸ್ ರಸ್ತೆಯಲ್ಲಿ ಸ್ಪೀಡ್ ಬ್ರೆಕರ್ ಅಳವಡಿಸುವಂತೆ, ಕಿಂಡಿ ಆಣೆಕಟ್ಟುಗಳ ಸಮರ್ಪಕ ನಿರ್ವಹಣೆ ಬಗ್ಗೆ ಹಾಗೂ ಮುಂಗಾರು ಪ್ರವೇಶಿಸುತ್ತಿರುವುದರಿಂದ ರೈತರಿಗೆ ಬಿತ್ತನೆ ಬೀಜ ಪೂರೈಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ಪೂರ್ಣಿಮ ಬಿ.ಸಿ, ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ತಹಶೀಲ್ದಾರರಾದ ಅಂನತ ಶಂಕರ್ ಹಾಗೂ ಕಾಪು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
