ಕಾಪು ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಕಾಪು ತಾಲೂಕು ಪಂಚಾಯತ್ 16 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದ ಟಾಸ್ಕ್ ಪೋರ್ಸ್ ಸಭೆ ಇಂದು ದಿನಾಂಕ 06-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಯಾವ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಅಂತಹ ಪಂಚಾಯತ್ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ನಿರ್ಮಿಸಲು ಟಾಸ್ಕ್ ಪೋರ್ಸ್ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಮತ್ತು ಕಿಂಡಿ ಆಣೆಕಟ್ಟುಗಳಲ್ಲಿ ನೀರಿನ ಸಂಗ್ರಹಣೆಗೆ ಹೆಚ್ಚಿನ ಒತ್ತು ನೀಡುವಂತೆ ಶಾಸಕರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.


















