HomeFresh Newsಕಾಪು: ಇನ್ನಂಜೆ ದೇವಳದ ಕೆರೆಯಲ್ಲಿ ಯುವಕನ ಶವ ಪತ್ತೆ

ಕಾಪು: ಇನ್ನಂಜೆ ದೇವಳದ ಕೆರೆಯಲ್ಲಿ ಯುವಕನ ಶವ ಪತ್ತೆ

ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ, ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ ಸುತ್ತಾಡಿಕೊಂಡಿದ್ದು ಸ್ಥಳೀಯ ನಾಯಿಯೊಂದಿಗೆ ಆಟವಾಡಿಕೊಂಡಿದ್ದ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ಇಂದು ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೆರೆಯ ದಡದಲ್ಲಿ ಲ್ಯಾಪ್‌ಟಾಪ್ ಸಹಿತ ಕೆಲ ಪರಿಕರಗಳು ಪತ್ತೆಯಾಗಿದೆ. ದೇವಳದ ಸಿಸಿ ಕ್ಯಾಮಾರ ಸಾಧನವನ್ನು ಪರಿಶೀಲನೆ ನಡೆಸಿದಾಗ ಈತ ರಾತ್ರಿ ಹನ್ನೆರಡರ ಬಳಿಕ ದೇವಳದ ಪರಿಸರದಲ್ಲಿ ಸುತ್ತಾಡುತ್ತಿದ್ದ ದೃಶ್ಯ ಸೆರೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕ ಸಹಕಾರದಿಂದ ಶವವನ್ನು ಕೆರೆಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments