ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ :ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹ

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿ ಮುಖ್ಯಾಧಿಕಾರಿಯವರನ್ನು ಆಗ್ರಹಿಸಿದರು, ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಗುರುತಿಸಿ ಸಮರ್ಪಕ ವಿತರಣೆಗೆ ಕ್ರಮ ಜರುಗಿಸಲಾಗುವುದು ಮತ್ತು ಅಗತ್ಯವಿರು ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಭರವಸೆಯನ್ನು ಮುಖ್ಯಾಧಿಕಾರಿಯವರು ನೀಡಿ, ಪ್ರತಿಭಟನಾಕಾರರ ಮನವೊಲಿಸಿದರು. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಅಶ್ಫಕ್ ಅಹಮ್ಮದ್, ಸದಸ್ಯರುಗಳಾದ ಶುಭದ ರಾವ್, ಪ್ರವೀಣ್ ಶೆಟ್ಟಿ, ಹರೀಶ್ ಕುಮಾರ್, ಪ್ರತಿಮಾ ರಾಣೆ, ಪ್ರಭಾ ಕಿಶೋರ್, ರೆಹಮತ್ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.