ಜಿಲ್ಲಾ ಪಂಚಾಯತ್ ಸದಸ್ಯರಿಂದ ಕಾರ್ಕಳದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಟ್ಟಿ ಬಿಡುಗಡೆ

ಕಾರ್ಕಳ: ಕಾರ್ಕಳದ ಐದು ಮಂದಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ತಮ್ಮ ಅವಧಿಯಲ್ಲಿ ತಮ್ಮ ತಮ್ಮ ಕ್ಷೇತ್ರದಲ್ಲಿ ಶಾಸಕರ ಅನುದಾನದಿಂದ ಆಗಿರುವಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾ ಪಂಚಾಯತ್ ಸದಸ್ಯರು ಪಟ್ಟಿ ಬಿಡುಗಡೆಗೊಳಿಸಿದರು. ಚುನಾವಣೆಯಲ್ಲಿ ನಮ್ಮ ಸಚಿವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಕಾರ್ಯಕ್ಷೇತ್ರದ ಅಭಿವೃದ್ಧಿಯನ್ನು ಅವರಿಂದ ಮಾಡಿಸಿಕೊಳ್ಳಬೇಕು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯಕೋಟಿಯನ್, ಉದಯ ಶೆಟ್ಟಿ, ಬೈಲೂರು ಸುಮಿತ್ ಶೆಟ್ಟಿ, ಜ್ಯೋತಿ ಹರೀಶ್, ದಿವ್ಯ ಗಿರೀಶ ಅಮೀನ್, ಉಪಸ್ಥಿತರಿದ್ದರು.
