ಕಾರ್ಕಳದ ಪಕ್ಷೇತರ ಅಭ್ಯರ್ಥಿ ಡಾ. ಮಮತಾ ಹೆಗ್ಡೆ ಬಿರುಸಿನ ಪ್ರಚಾರ

ಕಾರ್ಕಳದ ಪಕ್ಷೇತರ ಅಭ್ಯರ್ಥಿ ಡಾ. ಮಮತಾ ಹೆಗ್ಡೆ ಅವರು ಕ್ಷೇತ್ರಾದ್ಯಂತ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಕ್ಷೇತ್ರದ ಪ್ರಭಾವಿ ಅಭ್ಯರ್ಥಿಗಳು ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಡಾ. ಮಮತಾ ಹೆಗ್ಡೆ ಆರೋಪಿಸಿದ್ದಾರೆ.

ಕ್ಷೇತ್ರಾದ್ಯಂತ ಮತದಾರರು ಭ್ರಷ್ಟಾಚಾರದ ವಿರುದ್ಧ ನಿಂತಿದ್ದು ತನ್ನ ಪರ ಒಲವು ವ್ಯಕ್ತಪಡಿಸಿದ್ದಾರೆ ಎಂದು ಡಾ. ಮಮತಾ ಹೆಗ್ಡೆ ವಿಶ್ವಾಸ ವ್ಯಕ್ತಪಡಿಸಿದರು. ಪ್ರಾಮಾಣಿಕತೆ ಹಾಗೂ ಪಾರದರ್ಶಕ ರಾಜಕಾರಣ ಮಾಡಬೇಕೆನ್ನುವುದು ನನ್ನ ಉದ್ದೇಶವಾಗಿದೆ ಆ ಮೂಲಕ ರಾಜಕಾರಣದಲ್ಲಿ ಪರಿವರ್ತನೆ ತರಬೇಕೆಂಬವುದು ನನ್ನ ಸಂಕಲ್ಪ ಎಂದು ಡಾ. ಮಮತಾ ಹೆಗ್ಡೆ ಹೇಳಿದರು.
