ಉದ್ಘಾಟನೆಗೊಂಡು ಒಂದು ತಿಂಗಳ ಒಳಗೆ ಕೆಟ್ಟುಹೋದ ನೀರಿನ ಘಟಕ

ಕಾರ್ಕಳ: ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಮಾನ್ಯ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗೆ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ವ್ಯವಸ್ಥೆಯನ್ನು ಮಾಡಿರುತ್ತಾರೆ ಆದರೆ ಇದನ್ನ ಅಳವಡಿಸಿದ ಒಂದು ತಿಂಗಳ ಒಳಗೆ ಕೆಟ್ಟು ಹೋಗಿ ಇದು ಯಾರಿಗೂ ಬೇಡವಾದ ಘಟಕವಾಗಿದೆ. ಈ ನಿಟ್ಟಿನಲ್ಲಿ ನಾವು ಹಲವಾರು ಬಾರಿ ಪುರಸಭೆಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದರು ನಮಗೂ ಈ ಸಮಸ್ಯೆಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಇನ್ನು ಮುಂದಿನ ದಿನಗಳಲ್ಲಿ ಇದನ್ನು ದುರಸ್ತಿ ಮಾಡದಿದ್ದಲ್ಲಿ ಇದರ ಬಗ್ಗೆ ಪ್ರತಿಭಟನೆಯನ್ನು ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮಾಧ್ಯಮಕ್ಕೆ ತಿಳಿಸಿದರು.

Related Posts

Leave a Reply

Your email address will not be published.