ಕಾರ್ಕಳ: ಫೆ.6ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಬಿಜೆಪಿ ಪ್ರತಿಭಟನೆ

ಕಾರ್ಕಳ, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 6 ರಂದು ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಟನೆ ಸಭೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಮಾಹಿತಿ ನೀಡಿದರು.
ಕಳೆದ ಎರಡು ವರ್ಷಗಳಲ್ಲಿ ಆಡಳಿತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಗ್ರಾಮೀಣ ಭಾಗದ ಜನರ ನಿತ್ಯ ಜೀವನಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರಿಗೆ ತೊಂದರೆಯನ್ನು ನೀಡುವ ಮೂಲಕ ಹಿಂದೂ ಕಾರ್ಯಕರ್ತರ ದ ಮನ ಮಾಡುವ ಕೆಲಸವಾಗುತ್ತಿದೆ ಎಂದು ಆರೋಪಿಸಿದ್ದರು.
ಗ್ರಾಮೀಣ ಪ್ರದೇಶದ ಜನರಿಗೆ ಆಶ್ರಯವಾಗಿದ್ದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಗೌಪ್ಯವಾಗಿ ಮೂಲಭೂತ ಸೌಕರ್ಯವನ್ನು ಕಡಿತ ಮಾಡುವ ಕೆಲಸ ಸರಕಾರದಿಂದ ಆಗುತ್ತಿದೆ. ಕಂದಾಯ ಇಲಾಖೆಯಿಂದ ೯/೧೧ ಸೇರಿದಂತೆ ನಿವೇಶನಗಳಿಗೆ ಸಂಬಂಧಿಸಿದ ಇತರ ದಾಖಲೆಗಳನ್ನು ಪಡೆಯುವಲ್ಲಿ ಸಾರ್ವಜನಿಕರಿಗೆ ತುಂಬಾ ಕಷ್ಟಕರವಾದ ಪರಿಸ್ಥಿತಿಯಲ್ಲಿದ್ದು ಸರ್ಕಾರ ಜನರ ಭಾವನೆಗಳ ಜೊತೆ ಚೆಲ್ಲಾಟ ಮಾಡುತ್ತಿದೆ ಎಂದು ಆರೋಪಿಸಿದರು. ಈ ವಿಚಾರಗಳನ್ನು ಖಂಡಿಸಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಗೇರು ನಿಗಮದ ಮಾಜಿ ಅಧ್ಯಕ್ಷ ಮಣೀರಾಜ ಶೆಟ್ಟಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗಡೆ, ತಾಲೂಕು ವಕ್ತಾರ ರವೀಂದ್ರ ಮೊಯ್ಲಿ, ಜಿಲ್ಲಾ ಉಪಾಧ್ಯಕ್ಷ ಮಾವೀರ ಹೆಗಡೆ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ, ಸುರೇಶ ಶೆಟ್ಟಿ ಶಿವಪುರ ಉಪಸ್ಥಿತರಿದ್ದರು.