ಕಾರ್ಕಳ; ಕಡ್ತಲ ಬಿಜೆಪಿ ಕಾರ್ಯಕರ್ತರ ಸಭೆ

ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ, ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃ ದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು. ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ, ಕಾಂಗ್ರೆಸ್ಸಿಗೆ ಹಾಕುವ ಒಂದೊಂದು ಮತವೂ ಅದು ಪಿಎಫ್ಐಸಂಘಟನೆ ಬಲಪಡಿಸಿದಂತೆ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿಗಳು ಸಮಾಜದಲ್ಲಿ ವಿಜ್ರಂಭಿಸಿ ಕೇಕೆ ಹಾಕುತ್ತವೆ, ಮತ್ತೊಂದು ಅಫ್ಘಾನಿಸ್ತಾನ ಆಗಲು ಬಿಡಬಾರದು ಎಂದರು. ಬಿಜೆಪಿ ಸರಕಾರ ಗೋಹತ್ಯೆ, ಲವ್ ಜಿಹಾದ್, ಮತಾಂತರ ನಿಷೇಧ ಕಾನೂನುಗಳನ್ನು ತಂದು ಹಿಂದೂಗಳ ರಕ್ಷಣೆಗೆ ಕಂಕಣ ಬದ್ಧವಾಗಿದೆ.

ಕಾಂಗ್ರೆಸ್ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ, ಮತಾಂತರ ಕಾನೂನು ವಾಪಸ್ ಪಡೆಯುವ ಭರವಸೆಯನ್ನು ಈಗಾಗಲೇ ಆ ಪಕ್ಷದ ಮುಖಂಡರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಂತಹವರಿಗೆ ಅಧಿಕಾರ ಸಿಕ್ಕರೆ ರಾಜ್ಯದ ಜನತೆಯ ಅದರಲ್ಲೂ ಹಿಂದೂಗಳ ಪರಿಸ್ಥಿತಿ ಯಾವ ರೀತಿ ಇರಬಹುದು ಎಂದು ನೀವೊಮ್ಮೆ ಊಹಿಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು, ಅದನ್ನು ತಡೆಯಲು ರಾಜ್ಯಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರ ಈ ಎರಡೂ ಕಡೆ ಬಿಜೆಪಿ ಶಾಸಕ ಇರಬೇಕು. ಕ್ಷೇತ್ರದ ಮತದಾರರು ಈ ಎಲ್ಲ ಅಂಶವನ್ನು ಮನದಲ್ಲಿ ಇಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದರು. ಪ್ರಮುಖರಾದ ದಿನೇಶ್ ಪೈ, ಸಂಜೀವ ಪೂಜಾರಿ, ದಯಾನಂದ ಹೆಗ್ಡೆ ಮೊದಲಾದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Related Posts

Leave a Reply

Your email address will not be published.