ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಬೇಕು : ಉದಯ ಶೆಟ್ಟಿ ಮುನಿಯಾಲು

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ. ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ದೊರೆತ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ತಾಲೂಕ್ ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ನಾವು ಇಂದಿನಿಂದಲೇ ಸಿದ್ಧತೆ ನಡೆಸಬೇಕಾಗಿದೆ ಗೆಲುವಿಗಾಗಿ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಂಡವಾಗಿ ಕಾರ್ಯನಿರ್ವಹಿಸಬೇಕಾಗಿದೆ. ರಾಜ್ಯದ ಮತದಾರರು ಸ್ಪಷ್ಟ ಬಹುಮತದೊಂದಿಗೆ ಸುಭದ್ರ ಸರಕಾರ ರಚಿಸುವಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಕಾರ್ಕಳದಲ್ಲೂ ರಾತ್ರಿ ಹಗಲೆನ್ನದೆ ಕಾರ್ಯಕರ್ತರು ದುಡಿದಿದ್ದಾರೆ. ಅವರ ಶ್ರಮ ನಮ್ಮ ಮನಸ್ಸಿನಲ್ಲಿದೆ ಎಂದು ಹೇಳಿದರು.

ವಿಜಯೋತ್ಸವದ ಅಂಗವಾಗಿ ಪುಲ್ಕೇರಿ ಬೈಪಾಸ್ ನಿಂದ ಜೋಡು ರಸ್ತೆಯಾಗಿ ಕಾಂಗ್ರೆಸ್ ಕಚೇರಿಗೆ ವಾಹನ ಜಾಥಾ ನಡೆಯಿತು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಕೆಪಿಸಿಸಿ ಸದಸ್ಯರಾದ ಸುರೇಂದ್ರ ಶೆಟ್ಟಿ, ನೀರೆ ಕೃಷ್ಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೇಖರ ಮಡಿವಾಳ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಜಾರ್ಜ್ ಕ್ಯಾಸ್ಟಲ್ಲಿನೂ, ಚಂದ್ರಹಾಸ ಸುವರ್ಣ, ಸುಪ್ರೀತ್ ಶೆಟ್ಟಿ, ಪುರಸಭಾ ಸದಸ್ಯ ಅಷ್ಪಕ ಅಹಮದ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.