ಅಕ್ರಮವಾಗಿ ಡ್ರಗ್ಸ್ ಮಾರಾಟ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಚತುರ್ಮುಖ ಬಸದಿ ಬಳಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸ್ರು ಬಂಧಿಸಿದ್ದಾರೆ.
ಕಸಬಾ ಗ್ರಾಮದ ಸಾಲ್ಮರ ಜರಿಗುಡ್ಡೆ ನಿವಾಸಿ ಮೊಹಮ್ಮದ್ ಅಶ್ಫಾನ್(20) ಹಾಗೂ ನಲ್ಲೂರು ಪೇರಲ್ಕೆ ನಿವಾಸಿ ರಜೀಮ್ (31) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಕಾರ್ಕಳ ಚತುರ್ಮುಖ ಬಸದಿ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ಡಿವೈಎಸ್‍ಪಿ ಅರವಿಂದ ಕಲಗುಜ್ಜಿ ನೇತೃತ್ವದ ತಂಡ ಅಪರಾಧ ಪೊಲೀಸ್ ಠಾಣಾ ನಿರೀಕ್ಷಕ ಮಂಜುನಾಥ್ ಅವರೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಬಂಧಿತರಿಂದ ಮೆಥಾಪಿಟಮೈನ್ ಎಂಬ ಮಾದಕ ವಸ್ತು, ರಿಡ್ಝ್ ಕಾರು ಹಾಗೂ ಇತರ ವಸ್ತುಗಳು ಸೇರಿದಂತೆ ಒಟ್ಟು 3,66,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಈ ಕುರಿತು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.