ಕಾರ್ಕಳ : ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾರ್ಕಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಕಾರ್ಕಳ ಗ್ರಾಮಾಂತರ ಎಸ್‍ಐ ತೇಜಸ್ವಿ ಅವರಿಗೆ ಮನವಿ ಸಲ್ಲಿಸಿತು.ಇತ್ತೀಚೆಗೆ ಕೆಲವು ವ್ಯಕ್ತಿಗಳು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಹೆಸರು ಹೇಳಿ ಹಣ ಸಂಗ್ರಹಿಸುವ, ವಸೂಲಿ ಮಾಡುವ ಹಾಗೂ ಬೆದರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿವುದು ಸಂಘದ ಗಮನಕ್ಕೆ ಬಂದಿದೆ.

ಯಾವುದೇ ಪತ್ರಿಕೆ ಹಾಗೂ ಟಿವಿಯಲ್ಲಿ ಸುದ್ದಿ ಪ್ರಕಟಿಸಲು ಅಥವಾ ಪ್ರಸಾರ ಮಾಡಲು ಹಣ ನೀಡಬೇಕಾದ ಅಗತ್ಯ ಇರುವುದಿಲ್ಲ. ಆದರೂ ಕೆಲವು ನಕಲಿ ಪತ್ರಕರ್ತರು ಸುದ್ದಿಯ ಹೆಸರಿನಲ್ಲಿ ಹಣ ವಸೂಲಿ ಮಾಡುವ ದಂಧೆಗೆ ಇಳಿದಿರುವ ಬಗ್ಗೆ ಸಂಘಕ್ಕೆ ದೂರುಗಳು ಬಂದಿವೆ. ಈ ರೀತಿ ಪತ್ರಕರ್ತರ ಹೆಸರಿನಲ್ಲಿ ಹಣ ವಸೂಲಿಗೆ ಇಳಿಯುವ ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ರಜದ ಸಮಿತಿಯ ಸಂಚಾಲಕ ಮೊಮ್ಮದ್ ಶರೀಫ್ ಜಿಲ್ಲಾ ಉಪಾಧ್ಯಕ್ಷ ಆರ್ ಬಿ ಜಗದೀಶ್ ಕಾರ್ಕಳ ಪತ್ರಕರ್ತರ ಸಂಘದ ಕಾರ್ಯದರ್ಶಿ ಹರೀಶ್ ಆಚಾರ್ಯ, ಉಪಾಧ್ಯಕ್ಷ ಹರೀಶ್ ಸಚ್ಚರಿಪೇಟೆ ಜಿಲ್ಲಾ ಸಮಿತಿ ಸದಸ್ಯರಾದ ಉದಯ ಮುಂಡ್ಕೂರು, ಕೋಶಾಧಿಕಾರಿ ರಾಮ ಅಜೆಕಾರು, ಕೃಷ್ಣ ಅಜೆಕಾರ್, ಹರಿಪ್ರಸಾದ್ ನಂದಳಿಕೆ ,ಕಲಿಲ್ ಅರುಣ್ ಭಟ್, ಉಪಸ್ಥಿತರಿದ್ದರು.

Related Posts

Leave a Reply

Your email address will not be published.