ಕಾರ್ಕಳ : ಡಾ.ಮಮತಾ ಹೆಗ್ಡೆ ನಾಮಪತ್ರ ಸಲ್ಲಿಕೆ
ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಮತಾ ಹೆಗ್ಡೆ ಮಂಗಳವಾರದಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಅಖಿಲ ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷೆ ವೇದಾವತಿ ಹೆಗ್ಡೆ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಮೋದಿ ಬ್ರಿಗೇಡ್ ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ್ ಶೇಟ್, ಶಿವಮೊಗ್ಗ ಮಾಜಿ ಕಾಪೆರ್Çರೇಟರ್ ಸುಶೀಲಮ್ಮ ಮೊದಲಾದವರು ಉಪಸ್ಥಿತರಿದ್ದರು.