ಕಾರ್ಕಳ : ಸುನಿಲ್ ಪರ ಮುಂಬಯಿ ಸಂಸದ ಗೋಪಾಲ ಶೆಟ್ಟಿ ಮತಯಾಚನೆ

ಕಾರ್ಕಳ ಕ್ಷೇತ್ರದಲ್ಲಿ ಕಳೆದ ೫ ವರ್ಷದ ಅವಧಿಯಲ್ಲಿ ಅಭಿವೃದ್ಧಿಯ ನವ ಶಕ್ತಿಯೇ ನಡೆದಿದೆ. ಅದನ್ನು ಬೈಲೂರಿನ ಉಮಿಕ್ಕಳ ಬೆಟ್ಟದ ಪರಶುರಾಮ ಪ್ರತಿಮೆಯುಳ್ಳ ಥೀಮ್ ಪಾರ್ಕ್‌ಗೆ ಭೇಟಿ ನೀಡಿದೆ. ನಿಜಕ್ಕೂ ಅದನ್ನು ಕಂಡು ದಿಗ್ಬ್ರಮೆಗೊಂಡೆ, ನೂರಕ್ಕೆ ನೂರು ದೂರದೃಷ್ಟಿಯ ದೃಷ್ಟಿಕೋನದ ಯೋಜನೆಯಿದು ಎಂದು ಮುಂಬಯಿ ಬೊರಿವಲಿಯ ಕ್ಷೇತ್ರದ ಸಂಸದ ಗೋಪಾಲ ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ಕಾರ್ಕಳದ ಮಾಳ ಗ್ರಾಮದಲ್ಲಿ ಮತಯಾಚಿಸಿ ಮಾತನಾಡಿದರು ಕೈಗೊಂಡು ಮಾತನಾಡಿದರು. ದೂರದೃಷ್ಟಿಯ ಅಪರೂಪದ ಶಾಸಕ ಸುನಿಲ್‌ರನ್ನು ಕ್ಷೇತ್ರದ ಜನ ಕಳೆದುಕೊಂಡು ತಪ್ಪು ಮಾಡಬಾರದು ಹಾಗಾದಲ್ಲಿ ಅದು ಇಡೀ ಕಾರ್ಕಳ ಕ್ಷೇತ್ರಕ್ಕೆ ದೊಡ್ಡ ನಷ್ಟ ಎಂದು ಸಂಸದ ಗೋಪಾಲ ಶೆಟ್ಟಿ ಅಭಿಪ್ರಾಯ ಪಟ್ಟರು.
ಮೋದಿಯವರ ಭೇಟಿ ನಿಮಿತ್ತ ಅಂದು ಸಾಧ್ಯವಾಗಿಲ್ಲ ಥೀಂ ಪಾರ್ಕ್ ಡೆವಲಪ್‌ಮೆಂಟ್ ಬಗ್ಗೆ ಮುಂಬಯಿನ ಪ್ರತಿಯೊಬ್ಬರಿಗೂ ತಿಳಿದಿದೆ ನನ್ನ ಜೀವನದಲ್ಲಿ ಮುಂಬಯಿನಂತಹ ನಗರದಲ್ಲಿ ೨೫ಕ್ಕೂ ಅಧಿಕ ಮಹಾಪುರುಷರ ಪ್ರತಿಮೆ ಸ್ಥಾಪಿಸಿದ್ದು ಕಂಡಿದ್ದೇವೆ. ಅದು ಎಲ್ಲ ಸೇರಿದರೂ ಪರಶುರಾಮ ಥೀಮ್ ಪಾರ್ಕ್‌ಗೆ ಸಮವಾಗದು. ಮುಂದಿನ ಜನಾಂಗಕ್ಕೆ ಸನಾತನ ಧರ್ಮದ ಉಳಿವಿನ ಕಾರ್ಯ ಇಲ್ಲಿ ನಡೆದಿದೆ ಎಂದರು.

ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಅವರು ಮಾತನಾಡಿ, ಈದು-ಮಾಳದಂತಹ ಗ್ರಾಮೀಣ ಭಾಗದ ರಸ್ತೆಗಳಿಗೆ ಕಾಯಕಲ್ಪ ಸೇತುವೆ ನಿರ್ಮಾಣ, ಕಿಂಡಿ ಅಣೆಕಟ್ಟು, ವಿದ್ಯುತ್ ಸಮಸ್ಯೆಗೆ ಪರಿವರ್ತಕ, ಸಬ್ ಸ್ಟೇಶನ್ ಬಡವರಿಗೆ ಹಕ್ಕುಪತ್ರ ವಿತರಣೆ ಮೊದಲಾದ ಮೂಲಭೂತ ಸೌಕರ್ಯ ಕಲ್ಪಿಸಿ ಕಟ್ಟ ಕಡೆಯ ಸಮಸ್ಯೆಗೆ ಸ್ಪಂದಿಸಿದ್ದೇನೆ ಎಂದರು. ವೇದಿಕೆಯಲ್ಲಿ ಪ್ರಮುಖರಾದ ರೋಹಿತ್ ಹೆಗಡೆ ಎರ್ಮಾಳ್, ಹರೀಶ್ ಶೆಟ್ಟಿ ಎರ್ಮಾಳ್, ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.