HomeFresh Newsಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ

ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾಾರೆ. , ಕೋಶಾಧಿಕಾರಿ ಸ್ಥಾನಕ್ಕೆ ಕೆ.ಎಂ ಖಲೀಲ್ ಆಯ್ಕೆ ನಡೆಯಿತು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರೀಯೆ ತಾಲೂಕು ಪ್ರವಾಸಿ ಕೇಂದ್ರದಲ್ಲಿ ಬುಧವಾರ ಜರುಗಿತು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ  ರಾಜೇಶ್  ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ರಜತ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ ಕೋಶಾಧಿಕಾರಿ ಉಮೇಶ್  ಮಾರ್ಪಳ್ಳಿ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.

ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆಕಾರ್ಯದರ್ಶಿಯಾಗಿ ವಾಸುದೇವ ಭಟ್ , ಕ್ರೀಡಾ ಕಾರ್ಯದರ್ಶಿ ರಾಂ ಅಜೆಕಾರು ಸಾಂಸ್ಕೃತಿಕ ಕಾರ್ಯದರ್ಶಿ ಯಾಗಿ ಹರಿಪ್ರಸಾದ್ ನಂದಳಿಕೆ,   ಆಯ್ಕೆಗೊಂಡರು. ಜಿಲ್ಲಾಾ ಉಪಾಧ್ಯಕ್ಷ  ಆರ್. ಬಿ ಜಗದೀಶ್, ಜಿಲ್ಲಾಾ ಸಮಿತಿ ಪ್ರತಿನಿಧಿ  ಉದಯ್ ಮುಂಡ್ಕೂರ್ ಉಪಸ್ಥಿತರಿದ್ದರು. .

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments