ಮಂಗಳೂರು: ಕಾರ್ಮಿಕ ಅದಾಲತ್-2 ವಾಹನ ಜಾಥಾಕ್ಕೆ ಚಾಲನೆ

ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರ ಸಮಸ್ಯೆಗಳನ್ನು ಬಗೆ ಹರಿಸುವ ಸಲುವಾಗಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಮಿಕ ಅದಾಲತ್ ನಡೆಸಲಾಗುತ್ತಿದ್ದು, ಈ ಪ್ರಯುಕ್ತ ನಗರದ ಯೆಯ್ಯಾಡಿ ಶರ್ಬತ್ ಕಟ್ಟೆಯ ಸಮೀಪದಲ್ಲಿರುವ ಕಾರ್ಮಿಕ ಇಲಾಖೆ ಕಚೇರಿಯಲ್ಲಿ “ಕಾರ್ಮಿಕ ಅದಾಲತ್-2 ವಾಹನ ಜಾಥಾಕ್ಕೆ ಚಾಲನೆ ಸಿಕ್ಕಿತ್ತು. ಸಹಾಯಕ ಕಾರ್ಮಿಕ ಆಯುಕ್ತರಾದ ಶಿವ ಕುಮಾರ್ ಚಾಲನೆ ನೀಡಿದರು. ತದಬಳಿಕ ಮಾತನಾಡಿದ ಅವರು, ಕಾರ್ಮಿಕ ಸಚಿವರ ಸೂಚನೆ ಮೇರೆಗೆ ಜುಲೈ15ರಿಂದ ಆಗಸ್ಟ್ 15ರತನಕ ಜಿಲ್ಲೆಯಾದ್ಯಂತ 1 ತಿಂಗಳ ಕಾಲ ಕಾರ್ಮಿಕ ಅದಾಲತ್ ನಡೆಸಲಾಗುತ್ತಿದೆ.ಕಾರ್ಮಿಕ ಸಮುದಾಯದವರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಮಿಕರ ಅಹವಾಲು ಹಾಗೂ ಅರ್ಜಿ ಬಾಕಿ ಇದ್ದಾರೆ, ಅದನ್ನು ಕಾರ್ಮಿಕ ಇಲಾಖೆಗೆ ಸಲ್ಲಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಚಾರ ಜಾಗೃತಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಈ ವೇಳೆ ಕಾರ್ಮಿಕ ಅಧಿಕಾರಿ ಕಾವೇರಿ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್, ರಾಜಶೇಖರ್ ರೆಡ್ಡಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.