ಹವಾಮಾನ ವೈಪರೀತ್ಯ; ಆರೋಗ್ಯ ಇಲಾಖೆಯಿಂದ ರಾಜ್ಯದ ಜನತೆಗೆ ಮಾರ್ಗಸೂಚಿ ಪ್ರಕಟ

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳಿ ಮತ್ತು ಅತಿ ಕಡಿಮೆ ತಾಪಮಾನವು ವರದಿಯಾಗಿದೆ.ಚಳಿಗಾಲವೂ ಆಗಿರುವುದರಿಂದ ಎಲ್ಲ ಸಾರ್ವಜನಿಕರು ಆರೋಗ್ಯವನ್ನು ಕಾಪಾಡಿಕೊಳ್ಳಲು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಸೂಚಿಸಿದೆ. ಈ ರೀತಿಯ ವಾತಾವರಣದಲ್ಲಿ ಹೆಚ್ಚಾಗಿ ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಚಳಿಯ ವಾತಾವರಣ ಹಿನ್ನೆಲೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿ ಏನೇನಿದೆ?

ಸುಲಭವಾಗಿ ಜೀರ್ಣವಾಗುವ, ಬಿಸಿಬಿಸಿ ಆಹಾರ ಸೇವಿಸಬೇಕು. ಯಾವಾಗಲೂ ಸ್ವೆಟರ್‌, ಸಾಕ್ಸ್‌ ಧರಿಸಬೇಕು. ಮನೆಯ ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ ಎಂದು ಸೂಚಿಸಿದೆ. ಯಾವಾಗಲೂ ಬೆಚ್ಚಗಿನ ನೀರು ಕುಡಿಯುವುದು, ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು, ಸ್ನಾನಕ್ಕೆ ಬಿಸಿ ನೀರು / ಬೆಚ್ಚಗಿನ ನೀರನ್ನು ಉಪಯೋಗಿಸಬೇಕು. ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳಿ ಅಥವಾ ಸ್ಕಾರ್ಫ್ ಕಟ್ಟಕೊಳ್ಳ ಹಾಗೂ ಹೋಗಲೇಬೇಕಾದಲ್ಲಿ ಮಾಸ್ಕ್ ಧರಿಸಬೇಕು.ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳರುವರಿಂದ ದೂರವಿರಬೇಕು. ಮೊಣಕೈ ಒಳಗೆ ಸೀನುವುದು, ಕೆಮ್ಮುವುದು, ಅಥವಾ ಸೀನುವಾಗ, ಕೆಮ್ಮುವಾಗ ಟಿಶ್ಯೂ ಅಥವಾ ಕರವಸ್ತ್ರವನ್ನು ಬಳಸಬೇಕು ಕೈಗಳನ್ನು ಆಗಾಗ್ಗೆ ನೀರು ಹಾಗೂ ಸೋಪಿನಿಂದ ತೊಳೆಯಬೇಕು ಜ್ವರ‌ ಲಕ್ಷಣಗಳು ಅಥವಾ ಇತರೆ ಯಾವುದಾದರೂ ಖಾಯಿಲೆಯ ಲಕ್ಷಣಗಳಿದ್ದಲ್ಲಿ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯುವುದು. ಸ್ವಯಂವೈದ್ಯ ಪದ್ಧತಿಗಳನ್ನು ಅನುಸರಿಸಬಾರದು.ತಣ್ಣಗಿನ ಪಾನೀಯಗಳು,ಐಸ್ ಕ್ರೀಂಗಳನ್ನು ಸೇವಿಸಬಾರದು. ರೆಫ್ರಿಜರೇಟರ್‌ನ ಅಥವಾ ತಣ್ಣಗಿನ ನೀರನ್ನು ಕುಡಿಯಬಾರದು.ಮಳೆಯಲ್ಲಿ ನೆನೆಯುವುದನ್ನು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದನ್ನು ತಪ್ಪಿಸಬೇಕು.
ಹೊರಾಂಗಣ ಪ್ರವಾಸಗಳನ್ನು ಆದಷ್ಟು ನಿರ್ಭಂಧಿಸಿ. ಮಸಾಲಾಯುಕ್ತ ಪದಾರ್ಥಗಳು / ಜಂಕ್ ಫುಡ್‌ಗಳನ್ನು ಸೇವಿಸಬಾರದು ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Related Posts

Leave a Reply

Your email address will not be published.