ಇಂದಿನಿಂದ ಮೂರು ದಿನ ವಿಧಾನಸಭೆ ಅಧಿವೇಶನ

ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆಯವರು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು.
ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡಯಲಿದ್ದು, ಅದಕ್ಕೂ ಮುನ್ನಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದರು.
ಈ ಬಳಿಕ ಶಾಸಕರ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಅವರೆಲ್ಲರಿಗೂ ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.