HomeFresh Newsಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ : ಪೇರಡ್ಕ ಜುಮಾ ಮಸ್ಜಿದ್ ಹಾಗೂ...

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ : ಪೇರಡ್ಕ ಜುಮಾ ಮಸ್ಜಿದ್ ಹಾಗೂ ದರ್ಗಾ ಭೇಟಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರು ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೋಹಿಯುದ್ದಿನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿ ಇತಿಹಾಸ ಕೇಳಿ ಹಳೆಯ ಮಸೀದಿ ಮತ್ತು ಪೇರಡ್ಕ ದರ್ಗಾದ ಬಗ್ಗೆ ಸಂತಸ ವ್ಯಕ್ತಪಡಿಸಿ ಈ ಭಾಗದಲ್ಲಿ ಮುಸ್ಲಿಮರು ಮಸೀದಿ ಹಾಗೂ ದರ್ಗಾದಲ್ಲಿ ಭಯ ಭಕ್ತಿ ಶಿಸ್ತು ಉಳ್ಳವರು ಹಾಗೂ ಧಾರ್ಮಿಕ ತಿಳುವಳಿಕೆ ಉಳ್ಳವರು ಎಂದು ಸಂತಸ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ. ಎಂ ಶಾಹಿದ್ ತೆಕ್ಕಿಲ್ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಮಹಮದ್ ಕುಂಞಿ ತೆಕ್ಕಿಲ್, ಮಸೀದಿ ಕಾರ್ಯದರ್ಶಿ ಉಸ್ಮಾನ್, ಪಾಂಡಿ ಅಬ್ಬಾಸ್, ಸಾಧುಮೋನ್ ತೆಕ್ಕಿಲ್ ಪೇರಡ್ಕ ಜುರೈದ್ ತೆಕ್ಕಿಲ್ , ಖಲಿಲ್, ಜುನೈದ್ ತೆಕ್ಕಿಲ್, ಮೂಸನ್, ಮೊದಲದವರು ಉಪಸ್ಥಿತರಿದ್ದರು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments