ಕಾಸರಗೋಡು: ಅ.1ರಂದು ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿ

ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ , ಪ್ರೇರಣಾ ಜಿಲ್ಲಾ ಕಾರ್ಯಾಲಯ ಹೊಸಂಗಡಿ ಇವರ ಸಹಯೋಗದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿಯು ಅಕ್ಟೋಬರ್ 1ರಂದು ಬೆಳಿಗ್ಗೆ 10.30 ಕ್ಕೆ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ೮.೩೦ ರಿಂದ ವಿವಿದ ಭಜನಾ ತಂಡಗಳಿಂದ ಕುಣಿತ ಭಜನೆ ಮತ್ತು ನಂತರ ೧೦.೩೦ರಿಂz ನಡೆಯಲಿರುವ ಸಭಾಕಾರ್ಯಕ್ರಮವನ್ನು ಧಾರ್ಮಿಕ ಮುಂದಾಳು ರವೀಶ್ ತಂತ್ರಿ ಕುಂಟಾರು ಅವರು ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಮೂರ್ತಿ ಶ್ರೀ ಚಕ್ರಪಾಣಿ ದೇವ ಪೂಜಿತ್ತಾಯ ಆರಿಕ್ಕಾಡಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಬಜರಂಗದಳ ರಾಷ್ಟ್ರೀಯ ಸಹ ಸಂಯೋಜಕ್ ಸೂರ್ಯನಾರಾಯಣ ಜಿ ಅವರು ದಿಕ್ಸೂಚಿ ಭಾಷಣವನ್ನು ಮಾಡಲಿರುವರು. ಹಾಗೂ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಶ್ವ ಹಿಂದೂ ಪರಿಷತ್ ಕಾಸರಗೋಡು ಜಿಲ್ಲಾ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಜಯದೇವ ಖಂಡಿಗೆ, ಜಿಲ್ಲಾ ಕಾರ್ಯದರ್ಶಿ ಯಾದವ ಕೀರ್ತೇಶ್ವರ, ಕಣ್ಣೂರು ವಿಭಾಗ ಪದಾಧಿಕಾರಿಗಳಾದ ಸಂಕಪ್ಪ ಭಂಡಾರಿ ಬಳ್ಳಂಬೆಟ್ಟು, ಸುರೇಶ್ ಶೆಟ್ಟಿ ಪರಂಕಿಲ, ಮೀರಾ ಆಳ್ವ ಅವರು ವಿನಂತಿಸಿಕೊಂಡಿದ್ದಾರೆ.

Related Posts

Leave a Reply

Your email address will not be published.