ಕಟಪಾಡಿ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ
ಕಟಪಾಡಿ ಮಟ್ಟು ಹೊಳೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ರಿಂದ 50 ವರ್ಷ ವಯಸ್ಸಿನ ಗಂಡಸಿನ ಶವ ಕಟಪಾಡಿ ಮಟ್ಟು ಹೊಳೆಯಲ್ಲಿ ತೇಲಿ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು, ಬಾರೀ ಸೆಳೆತ ಹೊಂದಿದ ನೆರೆಯ ನೀರಿನಲ್ಲಿ ಸಾಹಸಮಯವಾಗಿ ತಡಕ್ಕೆ ಸೇರಿಸಿ ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದರು, ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಶವಾಗಾರಕ್ಕೆ ಸಾಗಿಸಿದ್ದು, ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ