ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದ ಕೊರಗಜ್ಜ ಸನ್ನಿಧಿಗೆ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ

ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿನ ಕಾರ್ಣಿಕ ಪ್ರಸಿದ್ಧ ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ ಸನ್ನಿಧಿಗೆ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ ನೀಡಿ, ಕೊರಗಜ್ಜನಲ್ಲಿ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು.
ಇತ್ತೀಚಿನ ದಿನಗಳಲ್ಲಿ ಸೆಲೆಬ್ರೆಟಿಗಳ ದಂಡೇ ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.

ಸಿನಿಮಾ ನಟ, ನಟಿಯರು, ಉದ್ಯಮಿಗಳು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.ಪ್ರಸ್ತುತ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಆಗಮಿಸಿದ್ದಾರೆ.ಮೇಘ ಶೆಟ್ಟಿಯವರು ಮಾಧ್ಯಮದೊಂದಿಗೆ ಮಾತನಾಡಿ, ಕಟಪಾಡಿ ಪೇಟೆಬೆಟ್ಟು ದೈವಸ್ಥಾನದಲ್ಲಿ ಕಾರ್ನಿಕ ಮೆರೆದ ಕೊರಗಜ್ಜ ಸನ್ನಿಧಿ ಭೇಟಿ ನೀಡಿದ್ದೇನೆ.

ಇಲ್ಲಿಯ ಕಾಣಿಕದ ಬಗ್ಗೆ ಕೇಳಿ ತಿಳ್ದಿದ್ದೇನೆ. ಆದ್ದರಿಂದ ಇಲ್ಲಿಗೆ ಭೇಟಿ ನೀಡಿ ಕೊರಗಜ್ಜನಲ್ಲಿ ನನ್ನ ಮನದ ಇಷ್ಟಾರ್ಥವನ್ನು ಬೇಡಿಕೊಂಡಿದ್ದೇನೆ ಎಂದರು.ಈ ಸಂದರ್ಭ ಭಗವಾನ್ ಶ್ರೀ ಬಬ್ಬು ಸ್ವಾಮಿ ದೇವಸ್ಥಾನದ ಅಧ್ಯಕ್ಷ ಹರಿಶ್ಚಂದ್ರ ಫಿಲಾರ್, ತುಕಾರಾಂ ಉರ್ವ, ಗುರಿಕಾರರು ಹತ್ತು ಸಮಸ್ತರು ಉಪಸ್ಥಿತರಿದ್ದರು.
