ಕಾಪು :ಉಚಿತ ನೇತ್ರ ತಪಾಸಣಾ ಶಿಬಿರದ ಉಚಿತ ಕನ್ನಡದ ವಿತರಣೆ
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದ ಉಚಿತ ಕನ್ನಡದ ವಿತರಣೆ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಕನ್ನಡಕ ವಿತರಣೆ ಮಾಡಿ ಅವರು ಮಾತನಾಡಿದರು.
ಅಟರ್ ಜನ್ಮ ಶತಾಬ್ದಿ ಪ್ರಯುಕ್ತ ನಡೆದ ಉಚಿತ ನೇತ್ರ ತಪಾಸಣೆ ಶಿಬಿರದಿಂದ ಒಟ್ಟು 139 ಜನರಿಗೆ ಉಚಿತ ಕನ್ನಡಕ ಹಾಗೂ 20 ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಪ್ರಸಾದ್ ನೇತ್ರಾಲಯದ ಡಾ. ಕೃಷ್ಣ ಪ್ರಸಾದ್, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಹಾಗೂ ಕಳತ್ತೂರು ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.


















