ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 1ರಂದು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಕಾಲಾವಧಿ ಹೂವಿನ ಪೂಜೆ ನಡೆಯಲಿದೆ.
ಅದೇ ದಿನ ಸಂಜೆ 7 ಗಂಟೆಗೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಹಾಗೂ ಸೆಪ್ಟೆಂಬರ್ 11ರಂದು ಶುಕ್ರವಾರ ರಾತ್ರಿ 7.30ಕ್ಕೆ ಕೊಪ್ಪಲಂಗಡಿ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನದಲ್ಲಿ ದೇವಳದ ಭಂಡಾರದ ವತಿಯಿಂದ ಹೂವಿನ ಪೂಜೆ ಜರಗಲಿದೆ.

ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀದೇವರ ಪ್ರಸಾದವನ್ನು ಸ್ವೀಕರಿಸಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


