ಕಾಪು: ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಶುಭಾರಂಭ

ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಶುಭಾರಂಭಗೊಂಡಿತು.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಅಂತೆಯೇ ಕಾಪು ವ್ಯಾಪ್ತಿಯ ಗ್ರಾಹಕರಿಗೆ ಸಿಹಿ ಸುದ್ದಿ ಎಂಬಂತೆ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಉದ್ಘಾಟನೆಗೊಂಡಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಂಡವಿ ರಿಯಲ್ ಎಸ್ಟೇಟ್ ಡೆವಲಪರ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಜೆರ್ರಿ ವಿನ್ಸೆಂಟ್ ಡಯಾಸ್ ಅವರು ರಿಬ್ಬನ್ ಕತ್ತರಿಸಿ ನೂತನ ಶೋರೂಂನನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಾಯಿರಾಧಾ ಗ್ರೂಫ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಮನೋಹರ್ ಎಸ್. ಶೆಟ್ಟಿ, ಉಡುಪಿ ಜಿಲ್ಲಾ ಕೋ-ಆಪರೇಟಿವ್ ಯೂನಿಯನ್‌ನ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ, ಮಂಗಳೂರಿನ ಡಿ.ಆರ್. ಸುವರ್ಣ ಗ್ರೂಪ್‌ನ ಜಗದೀಪ್ ಸುವರ್ಣ, ಶ್ರೀ ಡೆವಲಪರ್‍ಸ್‌ನ ಗಿರೀಶ್ ಎಮ್ ಶೆಟ್ಟಿ, ಟಿಐ ಕ್ಲೀನ್ ಮೊಬಿಲಿಟಿ ಪ್ರೈವೇಟ್ ಲಿಮಿಟೆಡ್‌ನ ರೀಜನಲ್ ಸೇಲ್ಸ್ ಮ್ಯಾನೇಜರ್ ಶೈಜು ಎಸ್ ಕುಮಾರ್, ಪೈಲ್ ಸೇಲ್ಸ್‌ನ ಎಂ.ಡಿ. ರತ್ನಾಕರ್ ಪೈ, ಟಿಐ ಕ್ಲೀನ್ ಮೊಬಿಲಿಟಿ ಪ್ರೈವೇಟ್ ಲಿಮಿಟೆಡ್‌ನ ಸರ್ವೀಸ್ ಹೆಡ್ ಹರೀಶ್ ಜಿ.ಜೆ ಜಯಂತ್ ಕೆರೆಕಾಡು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.