ಕಾಪು : ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾ.ಹೆ. 66 ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ.

ಘಟನೆಯಿಂದಾಗಿ ಗೂಡಂಗಡಿಯ ಮುಂಭಾಗ ಸಂಪೂರ್ಣ ನಜ್ಹುಗುಜ್ಜಾಗಿದ್ದು ಗೂಡಂಗಡಿಯಲ್ಲಿದ್ದ ವ್ಯಕ್ತಿಯೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಂಗಡಿ ಮಾಲಕರಿಗೆ ಸಾಂತ್ವನ ಹೇಳಿದ್ದಾರೆ.
