ಕಾಪು : ರಸ್ತೆ ಹೊಂಡಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಕಾರು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ ಬಿದ್ದ ಪರಿಣಾಮ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇದೆ. ಇಂದು ಹೊಂಡ ತಪ್ಪಿಸಲು ಹೋಗಿ ಕಾರೊಂದು ಡಿವೈಡರ್ ಏರಿ ನಿಂತ ಘಟನೆ ಕಾಪುವಿನಲ್ಲಿ ನಡೆದಿದೆ. ಕಾರೊಂದು ರಸ್ತೆಯ ಹೊಂಡಕ್ಕೆ ಬಿದ್ದು, ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕಾರು ಚಾಲಕಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು ತುಂಬಿ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ.
