ಕಾಪುವಿನಲ್ಲಿ ಬಿಜೆಪಿ ಪಕ್ಷ ಕಛೇರಿ ಉದ್ಘಾಟನೆ

ಕಾಪುವಿನಲ್ಲಿ ಬಿಜೆಪಿ ಪಕ್ಷದ ಕಛೇರಿಯನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಕಛೇರಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಮಾಜಿ ಶಾಸಕ ಲಾಲಾಜಿ ಮೆಂಡನ್ ಕಛೇರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್, ನವೀನ್ ಮುಂತಾದ ಮುಖಂಡರಿದ್ದರು.

Related Posts

Leave a Reply

Your email address will not be published.