HomeFresh Newsಕಾಪು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿ ಉದ್ಘಾಟನೆ

ಕಾಪು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿ ಉದ್ಘಾಟನೆ

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿಯನ್ನು ಕಾಪು ಮಿನಿ ವಿಧಾನಸೌಧದ ಪ್ರಥಮ ಮಹಡಿಯಲ್ಲಿ ಬಿಜೆಪಿಯ ಹಿರಿಯ ಚೇತನ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ, ಈಗಾಗಲೇ ಬಿಜೆಪಿ ಪಕ್ಷವು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಯಾವ ಬೂತ್‍ನಲ್ಲಿ ಕಡಿಮೆ ಮತ ಸಿಕ್ಕಿದೆಯೋ ಆ ಭಾಗಕ್ಕೆ ಹೆಚ್ಚಿನ ಒತ್ತು ನೀಡಿ ನಮ್ಮ ನ್ಯೂನ್ಯತೆಯನ್ನು ಸರಿ ಪಡಿಸಿಕೊಳ್ಳ ಬೇಕಾಗಿದೆ ಎಂದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾಪು ಕ್ಷೇತ್ರದ ಎಲ್ಲ ಜನರಿಗೂ ನಾನು ಶಾಸಕನಾಗಿದ್ದು ಎಲ್ಲರನ್ನೂ ಸಮಾನ ಭಾವದಿಂದ ನೋಡಿ ಕೆಲಸ ಮಾಡುತ್ತೇನೆ ಎಂದರು.
ಆರಂಭದಲ್ಲಿ ಶಾಸಕರ ಕಚೇರಿಯಲ್ಲಿ ಪೂಜಾಧಿ ಕಾರ್ಯಕ್ರಮ ಜರಗಿತು.

ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಮೆಂಡನ್, ರಘುಪತಿ ಭಟ್, ಉಡುಪಿ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಅಧ್ಯಕ್ಷ ಶ್ರೀಕಾಂತ ನಾಯಕ್ , ಕಾರ್ಯದರ್ಶಿ ಗೋಪಾಲ ಕೃಷ್ಣರಾವ್, ಶಿಲ್ಪ ಸುವರ್ಣ, ಅನಿಲ್ ಕುಮಾರ್, ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ, ಸುವರ್ಣ, ಪ್ರಕಾಶ್ ಶೆಟ್ಟಿ , ಸಂದೀಪ್ ಶೆಟ್ಟಿ ಕಲ್ಯಾ ಮತ್ತು ಬಿಜೆಪಿ ಕಾರ್ಯಕರ್ತರು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಶುಭ ಹಾರೈಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments