HomeFresh Newsಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ...

ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣ ಪ್ರಚಾರ ಕಾರ್ಯ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ನಂತರ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾತನಾಡಿ ಪಕ್ಷದದಲ್ಲಿ ಮಾಡಿದ ನಿಸ್ವಾರ್ಥ ಸೇವೆಯ ಮುಂದಿನ ಜವಾಬ್ದಾರಿಯನ್ನು ಗುರ್ಮೆ ಸುರೇಶ್ ಶೆಟ್ಟಿಯವರು ನಿಭಾಯಿಸಿಕೊಂಡು ಹೋಗುತ್ತಾರೆ ಎಂಬ ಭರವಸೆ ಕೊಟ್ಟರು. ನಂತರ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿವರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಪರಿಹಾರದ ಭರವಸೆ ಕೊಟ್ಟರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಸುಲೋಚನಾ ಭಟ್ ಬಂಟ್ವಾಳ ಹಾಗೂ ಕಾಪು ಪುರಸಭಾ ಸದಸ್ಯರಾದ ಹರಿಣಿ ಹಾಗೂ ಅನುಸೂಯ ಕಾಂಪ್ಲೆಕ್ಸ್ ನ ಅಧ್ಯಕ್ಷರಾದ ಡಾ. ಶ್ವೇತಾ ರವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments