HomeFresh Newsಕಾವೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಕಾವೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು.

ಜನಸ್ಪಂದನಾ ಕಾರ್ಯಕ್ರಮದಲ್ಲಿ , ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಯಿತು. ಈ ಸಂದರ್ಭ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ,ಸರಕಾರದ ಯೋಜನೆ, ಸೌಲಭ್ಯಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ನವೀನ್ ಕುಮಾರ್, ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್, ಮನಪಾ ಸದಸ್ಯರಾದ ಶರತ್ ಕುಮಾರ್, ಸುಮಂಗಳ ರಾವ್,ಕಿರಣ್ ಕುಮಾರ್ ಕೋಡಿಕಲ್, ಲೋಹಿತ್ ಅಮೀನ್,ಮನೋಜ್ ಕುಮಾರ್, ಅನಿಲ್ ಕುಮಾರ್, ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಪ್ರಮುಖರು, ವಿವಿಧ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments