ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಡಬದಿಂದ ಹದಿನೈದು ಸಾವಿರ ಜನ, ನೂರಕ್ಕೂ ಹೆಚ್ಚು ವಾಹನ: ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಹೇಳಿಕೆ

ಮಂಗಳೂರಿನ ಭಾವುಟ ಗುಡ್ಡೆಯಲ್ಲಿ ನಿರ್ಮಾಣವಾಗಿರುವ ಸ್ವಾತಂತ್ಯಯ ಹೋರಾಟಗಾರ ಸಮರ ವಿರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಕಡಬ ತಾಲೂಕಿನಿಂದ 15,000 ಮಿಕ್ಕಿಜನ ಸುಮಾರು ನೂರಕ್ಕಿಂತ ಹೆಚ್ಚು ವಾಹನಗಳಲ್ಲಿ ತೆರಳಲಿದ್ದಾರೆ ಎಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಹೇಳಿದರು.

ಅವರು ಕಡಬ ಗೌಡ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು. ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಆಶ್ರಯದಲ್ಲಿ ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪನೆಗೊಂಡ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ನವೆಂಬರ್ 19 ರಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಶ್ರೀ ಡಾ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಕೆದಮಬಾಡಿ ರಾಮಯ್ಯ ಗೌಡರು ನಮ್ಮ ಜಿಲ್ಲೆಯ ಐತಿಹಾಸಿಕ ಪುರುಷ ಇವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಜಾತಿ ಧರ್ಮ ಭೇಧ ಮರೆತು ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸುವ ಮೂಲಕ ಸ್ವಾತಂತ್ರ್ಯ ವೀರನಿಗೆ ಗೌರವ ಸಲ್ಲಿಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಒಕ್ಕಳಿಗ ಗೌಡ ಸೇವಾ ಸಂಘದ ಕಡಬ ತಾಲೂಕು ಗೌರವಾಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲು, ಕಾರ್ಯದರ್ಶಿ ಮಂಜುನಾಥ ಗೌಡ ಕೊಲಂತಾಡಿ, ನೂತನ ಸಮಿತಿ ಕಾರ್ಯದರ್ಶಿ ಪ್ರಶಾಂತ್ ಗೌಡ ಪಂಜೋಡಿ, ಮಹಿಳಾ ಘಟಕದ ಅಧ್ಯಕ್ಷೆ ನೀಲಾವತಿ ಶಿವರಾಮ ಗೌಡ, ಹಿರಿಯ ಮುಖಂಡ ಜನಾರ್ಧನ ಗೌಡ ಪಣೆಮಜಲು, ಪ್ರಮುಖರಾದ ಶಿವಪ್ರಸಾದ್ ಪುತ್ತಿಲ, ವೆಂಕಟ್ರಾಜ್ ಗೌಡ ಕೋಡಿಬೈಲು, ಧರ್ಮಪಾಲ ಗೌಡ ಕಣ್ಕಲ್, ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.